Home

Municipal Reforms Cell, Directorate of Municipal Administration has won the Bronze Award for the project Aasthi (GIS based property tax information System) in National Awards for e-Governance 2011

ಕುಡಿಯುವ ನೀರಿನ ಸಮಸ್ಯೆಗಾಗಿ ಶ್ರೀ.ಎಂ. ಎಸ್. ಗುಡಿಸಲಮನಿ ( ದೂರವಾಣಿ ಸಂಖ್ಯೆ: 08378-254222,9481450548) ಕಿರಿಯ ಅಭಿಯಂತರರು ಪುರಸಭೆ ಬಂಕಾಪುರ , ಇವರನ್ನು ಸಂಪರ್ಕಿಸಿ.

ಬಂಕಾಪುರ ಪುರಸಭೆಯ ಬಗ್ಗೆ :-

ಬಂಕಾಪುರ ಪಟ್ಟಣವು 30-12-2006 ರಲ್ಲಿ ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಪರಿವರ್ತಿತಗೊಂಡಿತು. ಬಂಕಾಪುರ ಪಟ್ಟಣವು ರಾಜ್ಯದ ರಾಜಧಾನಿ ಬೆಂಗಳೂರಿನಿಂದ ಸುಮಾರು 340 ಕಿಲೋಮೀಟರ್ ಹಾಗೂ ಜಿಲ್ಲಾ ಕೇಂದ್ರ ಹಾವೇರಿಯಿಂದ 25 ಕಿಲೋಮೀಟರ ಅಂತರದಲ್ಲಿದೆ . ಬಂಕಾಪುರ ಪಟ್ಟಣವು 3.10 ಚ.ಕಿ.ಮೀ. ವಿಸ್ತಿರ್ಣ ಹೊಂದಿದ್ದು, 23 ವಾರ್ಡಗಳಲ್ಲಿ 2001 ರ ಜನಗಣತಿ ಪ್ರಕಾರ 20324 ಜನಸಂಖ್ಯೆಯನ್ನು ಹೊಂದಿದೆ. ಇಲ್ಲಿನ ಪ್ರಮುಖ ಬಹು ಮುಖ್ಯ ಆಕರ್ಷಣೆ ನವಿಲುಧಾಮ. ಬಂಕಾಪುರದ ನವಿಲುಧಾಮವು ಭಾರತದಲ್ಲಿಯೇ 2ನೇ ಅತೀ ದೊಡ್ಡ ನವಿಲುಧಾಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹಾಗೂ ಬಂಕಾಪುರದ ಕೋಟೆ ಇಲ್ಲಿನ ಕೋಟೆಯಲ್ಲಿ ಶ್ರೀ ನಗರೇಶ್ವರ ದೇವಸ್ಥಾನವು 66 ಕಂಬಗಳುಳ್ಳು ವಾಸ್ತು ಶಿಲ್ಪವನ್ನು ಹೊಂದಿದ್ದು ಅತೀ ರಮಣೀಯ ಪ್ರವಾಸಿ ಸ್ಥಳವಾಗಿದೆ. ಅಲ್ಲದೆ ಸಂತ ಕವಿ ಕನಕದಾಸರ ಜನ್ಮಸ್ಥಳವಾದ ಬಾಡ ಗ್ರಾಮವು ಬಂಕಾಪುರದಿಂದ ಕೇವಲ 2 ಕಿ.ಮಿ ಅಂತರದಲ್ಲಿದೆ.

About Bankapur TMC :-

 Bankapur TMC was converted from Town Panchayat to Town Municipal Council in the year of 30-12-2006 . Bankapur Town is Approximately 340 K.M distance from State Capital City Banglore and an 25 K.M distance from District Head Quarters of Haveri. Bankapur Town Municipal Council (TMC) jurisdiction extends upto an area of 3.10 Sq. Km, Housing of 20324 population as per census 2001 in 23 Wards. The Main Center of Attraction is Peacock Conservation Park. This is the India's Second Biggest Peacock Conservative Park.And Bankapur Fort is having Sri Nagareshwara Temple which is having 66 pillers a very beautiful Famous Tourism Place. And Saint Kavi Kanakadas Birth Place Bada Village is 2 K.M distance from Bankapur TMC.

 

-: ಬಂಕಾಪುರ ಪುರಸಭೆಯ ಪ್ರಮುಖ ಧ್ಯೇಯೋದ್ದೇಶಗಳು:-

 

  • ಬಂಕಾಪುರ ಪುರಸಭೆಯ ನಾಗರೀಕರ ಮೂಲಭೂತ ಅವಶ್ಯಕತೆಗಳಾದ ಶುದ್ಧ ಕುಡಿಯುವ ನೀರು,ಬೀದಿ ದೀಪ ಹಾಗೂ ಪರಿಸರ ನೈರ್ಮಲ್ಯದ ಬಗ್ಗೆ ಪುರಸಭೆಯು ಪ್ರಮುಖ ಆದ್ಯತೆ ನೀಡಿರುತ್ತದೆ.
  • ಈ ನಿಟ್ಟಿನಲ್ಲಿ ಪಟ್ಟಣಕ್ಕೆ   ಶುದ್ಧೀಕರಿಸಿದ ನೀರು ಸರಬರಾಜು ಮಾಡಲಾಗುತ್ತಿದೆ.
  • ಪಟ್ಟಣದಲ್ಲಿ ದಿನ ನಿತ್ಯ ಸ್ವಚ್ಛತೆ ಕಾಪಾಡುವ ಸಲುವಾಗಿ ಪಟ್ಟಣದ ದೈನಂದಿನ ತ್ಯಾಜ್ಯವನ್ನು ಘನ ತ್ಯಾಜ್ಯ ವಿಲೇವಾರಿ ಸ್ಥಳಕ್ಕೆ ರವಾನಿಸಲಾಗುತ್ತಿದ್ದು ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮನೆ - ಮನೆಗಳಿಗೆ ಬೇಟಿ ನೀಡಿ ಕಸ ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ. ಪಟ್ಟಣದಲ್ಲಿ ಸೊಳ್ಳೆಗಳ ಹಾವಳಿ ತಡೆಗಟ್ಟುವ ಉದ್ದೇಶದಿಂದ ಪ್ರತಿ ದಿನ ಫಾಗಿಂಗ್ ಮಾಡಲಾಗುತ್ತಿದೆ.
  • ಸರ್ಕಾರದ ವಿವಿಧ ಯೋಜನೆಗಳಾದ ಎಸ್.ಎಫ್.ಸಿ.,ಸಿ.ಎಂ.ಎಸ್.ಎಂ.ಟಿ.ಡಿ.ಪಿ ,13ನೇ ಹಣಕಾಸು ಹಾಗೂ ಇನ್ನಿತರ ಯೋಜನೆಗಳಡಿಯಲ್ಲಿ ಪಟ್ಟಣದ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳಾದ ರಸ್ತೆ , ಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.
  • ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹಾಗೂ ಬಡತನ ನಿರ್ಮೂಲನೆಯ ನಿಟ್ಟಿನಲ್ಲಿ 22.75%, 7.25%, 3%, ನಮ್ಮ ಮನೆ ವಸತಿ ಯೋಜನೆ ಹಾಗೂ ಎಸ್.ಜೆ.ಎಸ್.ಆರ್.ವೈ ಇತ್ಯಾದಿ ಯೋಜನೆಗಳಡಿಯಲ್ಲಿ ಹಿಂದುಳಿದ ವರ್ಗಗಳ, ಆರ್ಥಿಕವಾಗಿ ಹಿಂದುಳಿದವರ, ವಿಕಲ ಚೇತನರ ಅಭಿವೃದ್ಧಿಗಾಗಿ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ.
  • ಸಾರ್ವಜನಿಕ ಹಿತ ದೃಷ್ಟಿಯಿಂದ ಹಾಗೂ ಕಛೇರಿ ಕೆಲಸ ಕಾರ್ಯಗಳ ವ್ಯವಸ್ಥಿತ ನಿರ್ವಹಣೆಯ ಸದುದ್ದೇಶದಿಂದ ಬಂಕಾಪುರ ಪುರಸಭೆಯ  ಕಛೇರಿ ಆಡಳಿತ ವ್ಯವಸ್ಥೆಯನ್ನು ಗಣಕೀಕರಣಗೊಳಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ.
  • ನಿಟ್ಟಿನಲ್ಲಿ ಕರ್ನಾಟಕ ಪೌರ ಸುಧಾರಣಾ ಯೋಜನೆಯಡಿ ಪೌರಾಡಳಿತ ನಿರ್ದೇಶನಾಲಯ, ಪೌರ ಸುಧಾರಣಾ ಕೋಶ, ಬೆಂಗಳೂರುರವರ ಸಹಯೋಗದೊಂದಿಗೆ ಈಗಾಗಲೇ ಹಲವಾರು ಮಾಹಿತಿಗಳನ್ನು ಗಣಕೀಕರಣಗೊಳಿಸಲಾಗಿದ್ದು  ಬಂಕಾಪುರ ಪಟ್ಟಣದ ನಾಗರೀಕರೇ ತಮ್ಮ ಮಾಹಿತಿಯನ್ನ ಪಡೆಯಬಹುದಾದ ಸೌಲಭ್ಯ ಒದಗಿಸಲಾಗಿರುತ್ತದೆ. 

 



 ಕೆ.ಎಂ.ಆರ್.ಪಿ ಗಣಕೀಕರಣ ಯೋಜನೆಯ ಕಿರು ಪರಿಚಯ

ಪೌರಸುಧಾರಣಾ ಕೋಶದ ಮೇಲುಸ್ತುವಾರಿಯಲ್ಲಿ  ಬಂಕಾಪುರ ಪುರಸಭೆಯಲ್ಲಿ ಹಲವಾರು ಗಣಕೀಕರಣ ಯೋಜನೆಗಳು ಪೂರ್ಣಗೊಂಡಿರುತ್ತವೆ ಹಾಗೂ ಇನ್ನು ಕೆಲ ಗಣಕೀಕರಣ ಯೋಜನೆಗಳು ಪ್ರಗತಿಯಲ್ಲಿದ್ದು ಶೀಘ್ರದಲ್ಲಿ ಮುಕ್ತಾಯಗೊಂಡು ಸಾರ್ವಜನಿಕರ ಉಪಯೋಗಕ್ಕಾಗಿ ಲಭ್ಯವಾಗಲಿವೆ.ಈಗಾಗಲೇ ಬಹುತೇಕ ಮಾಹಿತಿಯನ್ನು ಕಛೇರಿ ವೆಬ್‌ ಸೈಟ್‌ನಲ್ಲಿ ಅಳವಡಿಸಲಾಗಿರುತ್ತದೆ.



  • ಕಛೇರಿ ವೆಬ್‌ಸೈಟ್:ಬಂಕಾಪುರ ಪುರಸಭೆಯು ತನ್ನದೇ ಆದ ವೆಬ್‌ಸೈಟ್ ಹೊಂದಿದ್ದು ಪಟ್ಟಣದ ಸಮಗ್ರ ಮಾಹಿತಿ ಇದರಲ್ಲಿ ಲಭ್ಯವಿರುತ್ತದೆ. ಕಛೇರಿಯ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಬಿಂಬಿಸುವ ಸದುದ್ದೇಶದಿಂದ ಪೌರಸುಧಾರಣಾ ಕೋಶ ಈ ವೆಬ್ ಸೈಟ್ ಅಭಿವೃದ್ಧಿ ಪಡಿಸಿದ್ದು ಬಂಕಾಪುರ ಪುರಸಭೆಯಿಂದ ಈ ವೆಬ್ ಸೈಟ್ ನಿರ್ವಹಣೆ ಮಾಡಲಾಗುತ್ತಿದೆ. ಪ್ರಮುಖವಾಗಿ ಸಿಬ್ಬಂದಿ ಮಾಹಿತಿ, ಕೌನ್ಸಿಲ್ ಮಾಹಿತಿ, ಚುನಾಯಿತ ಪ್ರತಿನಿಧಿಗಳ ಮಾಹಿತಿಟೆಂಡರ್ ಮಾಹಿತಿ, ಸಾರ್ವಜನಿಕ ಪ್ರಕಟಣೆ ಕಾಯ್ದೆ, ಮಾಹಿತಿ ಹಕ್ಕು, ಘನತ್ಯಾಜ್ಯ ವಸ್ತು ವಿಲೇವಾರಿ, ಮಳೆ ನೀರು ಕೊಯ್ಲು ಪದ್ಧತಿ, ಪಟ್ಟಣದ ರಸ್ತೆ, ಬೀದಿ ದೀಪ, ಚರಂಡಿ ಇತ್ಯಾದಿಗಳಿಗೆ ಸಂಬಂಧಿಸಿದ ಅಂಕಿ ಅಂಶಗಳು, ಪಟ್ಟಣದ ಹಣಕಾಸು ಪದ್ಧತಿ ವಿವರ, ಆಯ ವ್ಯಯ, ಸಭಾನಡವಳಿಗಳು ಇನ್ನು ಹತ್ತು ಹಲವು ಉಪಯುಕ್ತ ಮಾಹಿತಿ ಈ ವೆಬ್ ತಾಣದಲ್ಲಿ ಲಭ್ಯವಿರುತ್ತದೆ. ಪೌರ ಸುಧಾರಣಾ ಕೋಶದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿ ನಿರ್ವಹಿಸಲಾಗುತ್ತಿರುವ ಎಲ್ಲಾ ಆನ್‌ಲೈನ್ ಅಪ್ಲಿಕೇಷನ್‌ಗಳು ಈ ವೆಬ್ ತಾಣದಲ್ಲಿ ದೊರೆಯುವಂತಿದ್ದು ಪಟ್ಟಣದ ನಾಗರೀಕರು ಈ ತಾಣಕ್ಕೆ ಬೇಟಿ ನೀಡಿ ಅವಶ್ಯ ಮಾಹಿತಿ ಪಡೆಯಬಹುದಾಗಿರುತ್ತದೆ.
  • ಜನನ-ಮರಣ ದಾಖಲೆಗಳ ಆನ್ ಲೈನ್ ಅಪ್ಲಿಕೇಷನ್:1990ರಿಂದ ಇಲ್ಲಿಯವರೆಗಿನ ಪಟ್ಟಣದ ಎಲ್ಲಾ ಜನನ-ಮರಣ ದಾಖಲೆಗಳನ್ನು ಗಣಕೀಕರಣಗೊಳಿಸಲಾಗಿದ್ದು ಸಾರ್ವಜನಿಕರಿಗೆ ಗಣಕೀಕೃತ ಜನನ-ಮರಣ ದಾಖಲಾತಿಗಳನ್ನು ವಿತರಿಸಲಾಗುತ್ತಿದೆ. ಹಳೆಯ ಜನನ-ಮರಣ ದಾಖಲಾತಿಗಳ ಡಾಟಾ ಎಂಟ್ರಿ ಕಾರ್ಯ ಮುಕ್ತಾಯಗೊಂಡಿರುತ್ತದೆ.   ಇದರಿಂದ ಸಾರ್ವಜನಿಕರು ತ್ವರಿತವಾಗಿ ಜನನ-ಮರಣ ದಾಖಲಾತಿಗಳನ್ನು ಪಡೆಯುವಲ್ಲಿ ಸಹಕಾರಿಯಾಗಿದೆ.
  • ಪಿ.ಜಿ.ಆರ್. ಆನ್ ಲೈನ್ ಅಪ್ಲಿಕೇಷನ್: ಪಟ್ಟಣದ ನಾಗರೀಕರ ದೈನಂದಿನ ಅವಶ್ಯಕತೆಗಳಾದ ಬೀದಿ ದೀಪ, ಕುಡಿಯುವ ನೀರು, ಸ್ವಚ್ಚತೆ ಇತ್ಯಾದಿ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಪರಿಹಾರ ಕೇಂದ್ರ ಸ್ಥಾಪಿಸಲಾಗಿರುತ್ತದೆ. ಈ ಕುಂದುಕೊರತೆ ಪರಿಹಾರ ಕೇಂದ್ರವು ಪ್ರತಿ ದಿನ ಮುಂಜಾನೆ 8.00 ರಿಂದ ಸಂಜೆ 8.00ರ ವರಗೆ ಕಾರ್ಯ ನಿರ್ವಹಿಸುತ್ತದೆ.ಸಾರ್ವಜನಿಕರು ಕುಂದುಕೊರತೆ ಪರಿಹಾರ ಕೇಂದ್ರದ ಸಹಾಯವಾಣಿ : 08378-254222 ಕ್ಕೆ ಕರೆ ಮಾಡಿ ದೂರು ನೊಂದಾಯಿಸಿಕೊಳ್ಳಬಹುದಾಗಿದೆ ಅಲ್ಲದೆ ತಮ್ಮ ದೂರಿನ ಸ್ಥಿತಿಯ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಅದೇ ರೀತಿ ಈ ಕಛೇರಿ ವೆಬ್ ತಾಣ www.bankapurtown.gov.in ಕ್ಕೆ ಬೇಟಿ ನೀಡಿ ಪಿ.ಜಿ.ಆರ್. ಆನ್‌ಲೈನ್ ಅಪ್ಲಿಕೇಷನ್ ಮುಖಾಂತರವೂ ದೂರು ನೊಂದಾಯಿಸಬಹುದಾಗಿರುತ್ತದೆ (ಆನ್‌ಲೈನ್ ಮುಖಾಂತರ ದೂರು ನೊಂದಾಯಿಸುವ ವಿಧಾನ) ಅಥವಾ ನೇರವಾಗಿ ಕುಂದು ಕೊರತೆ ಪರಿಹಾರ ಕೇಂದ್ರಕ್ಕೆ ಬೇಟಿ ನೀಡಿ ದೂರು ನೊಂದಾಯಿಸಬಹುದಾಗಿರುತ್ತದೆ. ದೂರು ಸ್ವೀಕರಿಸಿದ ನಂತರ ಕುಂದು ಕೊರತೆ ಪರಿಹಾರ ಕೇಂದ್ರದ ನಿರ್ವಾಹಕರು ಒಂದು " Unique Complaint Tracking Number " ನೀಡುವರು. ಇದರ ಸಹಾಯದಿಂದ ನಾಗರೀಕರು ತಮ್ಮ ದೂರಿನ ಸ್ಥಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ದೂರು ಪರಿಹಾರ ಕಾರ್ಯದ ಪ್ರತಿ ಹಂತದ ಸ್ಥಿತಿಯನ್ನು ಇ-ಮೇಲ್ ಮೂಲಕ ಸಹ ಇ-ಮೇಲ್ ವಿಳಾಸ ನೊಂದಾಯಿಸಿ  ಪಡೆಯಬಹುದಾಗಿರುತ್ತದೆ.
  • ಭೌಗೋಳಿಕ ಆಸ್ತಿ ತೆರಿಗೆ ಪದ್ಧತಿ ಅನುಷ್ಟಾನ ಕಾರ್ಯ:ಪೌರ ಸುಧಾರಣಾ ಯೋಜನೆಯಡಿ ಬಂಕಾಪುರ ಪುರಸಭೆಯಲ್ಲಿ ಭೌಗೋಳಿಕ ಆಸ್ತಿ ತೆರಿಗೆ ಪದ್ಧತಿ ಅನುಷ್ಟಾನ ಅತೀ ಪ್ರಮುಖ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪಟ್ಟಣದ ಎಲ್ಲಾ ಆಸ್ತಿಗಳ ಸರ್ವೆಕಾರ್ಯ ಪೂರ್ಣಗಳಿಸಿ, ಆಸ್ತಿಗಳ ವಿವರ (ನಮೂನೆ "ಸಿ") ಡಾಟಾ ಎಂಟ್ರಿ ಮಾಡಿಸಿ ಪೌರ ಸುಧಾರಣಾ ಕೋಶಕ್ಕೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಪೌರ ಸುಧಾರಣಾ ಕೋಶದಿಂದ ಆನ್‌ಲೈನ್ ಮಾಡಲಾಗುವುದು.ಇದರಿಂದ ಪಟ್ಟಣದ ಆಸ್ತಿಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದ್ದುಆಸ್ತಿ ತೆರಿಗೆ ವಿವರ ಗಳನ್ನು ಸಹ ಸಾರ್ವಜನಿಕರು ಆನ್‌ಲೈನ್ ಮೂಲಕ ಪಡೆಯಬಹುದಾಗಿರುತ್ತದೆ ಹಾಗೂ ಆನ್ ಲೈನ್ ಮೂಲಕ ತೆರಿಗೆ ಆಸ್ತಿತೆರಿಗೆ ಪಾವತಿಸಬಹುದಾಗಿದ್ದು ಬಂಕಾಪುರ  ಪಟ್ಟಣದ ನಾಗರೀಕರು ಶೀಘ್ರದಲ್ಲಿಯೇ ಇದರ ಸದುಪಯೋಗ ಪಡೆದುಕೊಳ್ಳಲಿದ್ದಾರೆ.
  • ನಿಧಿ ಆಧಾರಿತ ದ್ವಿ-ನಮೂದು ಸಂಚಯನ ಲೆಕ್ಕ ಪದ್ಧತಿ: ಬಂಕಾಪುರ ಪುರಸಭೆ ಕಛೇರಿಯಲ್ಲಿ ನಿಧಿ ಆಧಾರಿತ ದ್ವಿನಮೂದು ಸಂಚಯನ ಲೆಕ್ಕ ಪದ್ಧತಿಯನ್ನು ಈಗಾಗಲೇ ಗಣಕೀಕರಣಗೊಳಿಸಲಾಗಿದ್ದು  ಈ ಆನ್‌ಲೈನ್ ಅಪ್ಲಿಕೇಷನ್‌ ಮುಖಾಂತರ ನಗರ ಸ್ಥಳೀಯ ಸಂಸ್ಥೆಯ ಎಲ್ಲಾ ಯೋಜನೆಗಳ ಆರ್ಥಿಕ ಅಂಕಿ ಅಂಶಗಳನ್ನು ಕಛೇರಿಯ ಲೆಕ್ಕಿಗರು ದಿನಂಪ್ರತಿ ಅಪ್‌ಡೇಟ್‌ ಮಾಡುತ್ತಿದ್ದು ಕಛೇರಿಯ ಆಯ-ವ್ಯಯದ ಸಮರ್ಪಕ ನಿರ್ವಹಣೆಗೆ ಸಹಕಾರಿಯಾಗಿದೆ. ಈ ಆನ್‌ಲೈನ್ ಅಪ್ಲಿಕೇಷನ್ ಮುಖಾಂತರ ವಾರ್ಷಿಕ ಕಾರ್ಯ ನಿರ್ವಹಣಾ ವರದಿಯನ್ನೂ ಸಹ ಪಡೆಯಬಹುದಾಗಿದ್ದು ಕಛೇರಿಯ ಎಲ್ಲಾ ಆರ್ಥಿಕ ಚಟುವಟಿಕೆಗಳ ವಿವರ ಕಛೇರಿ ವೆಬ್‌ಸೈಟ್ ಮೂಲಕ ಅಂತರ್ಜಾಲದಲ್ಲಿ ಸಾರ್ವಜನಿಕರಿಗೆ ಲಭ್ಯವಿರುತ್ತದೆ.

ತರೆ ಆನ್‌ಲೈನ್ ಅಪ್ಲಿಕೇಷನ್‌ಗಳು:  ಸಿ.ಎಂ.ಎಸ್.ಎಂ.ಟಿ.ಡಿ.ಪಿ, ಆಶಾಕಿರಣ ಮಾಹಿತಿ, ಎಸ್.ಜೆ.ಎಸ್.ಆರ್.ವೈ, ಎಸ್.ಎಲ್.ಬಿ, ನಮ್ಮ ಮನೆ ಇತ್ಯಾದಿ ಪ್ರಮುಖ ಆನ್ ಲೈನ್ ಅಪ್ಲಿಕೇಷನ್ ಗಳನ್ನು ಪೌರಸುಧಾರಣಾ ಕೋಶದ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಲಾಗಿದ್ದು ಕಛೇರಿಯ ಸುಲಭ ನಿರ್ವಹಣೆಗೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಈ ಆನ್‌ಲೈನ್ ಅಪ್ಲಿಕೇಷನ್‌ಗಳ ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ

 

 

 

 


 

   | This page is maintained by :  Chiefofficer, Bankapur

Last Updated on 15-03-2012

No. Of Visitors :
Last Updated   : 21/03/2012  Release History
Release 2.0.0, Powered By Karnataka Municipal Data Society & maintained by Bankapur TMC
This website can best viewed with the resolution 1024 * 768 using Internet Explorer 7.0 or above.
Valid CSS!